Oplus_131072
Spread the love

 

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ೫೮೨ ಅಂಕಗಳಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಡೂರಿನ ಮರಡೀಹಳ್ಳಿಯ ವಿದ್ಯಾರ್ಥಿನಿ ಸಂಗೀತ

ಕಡೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮರಡೀಹಳ್ಳಿಯ ಸಂಗೀತಾ ಅವರನ್ನು ತಾಲ್ಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ  ಬುಧವಾರ ನಾಗರೀಕ ಸನ್ಮಾನ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣಗೆರೆಯಂತಹ ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಸೀಮಿತ ಸೌಲಭ್ಯದೊಂದಿಗೆ ಓದಿದ ಸಂಗೀತ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ‌ಪಡೆದಿರುವದು ಹೆಮ್ಮೆಯ ಸಂಗತಿ. ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ. ಅವರ ಮುಂದಿನ ವಿದ್ಯಾಭ್ಯಾಸ ಸುಗಮವಾಗಿ ಸಾಗಲಿ. ಅವರಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದರು.
ಗೌರವ ಸ್ವೀಕರಿಸಿದ ಸಂಗೀತ ಮಾತನಾಡಿ, ಪೋಷಕರ ಸಹಕಾರ ಮತ್ತು ಕಾಲೇಜಿನ ಉಪನ್ಯಾಸಕರ ನಿರಂತರ ಮಾರ್ಗದರ್ಶನದಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ನನ್ನನ್ನು ಗೌರವಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.
ಗ್ರಾಮಪಂಚಾಯಿತಿ ಸದಸ್ಯ ಮರಡೀಹಳ್ಳಿ ಹನುಮಂತಪ್ಪ,  ಜಿಗಣೆಹಳ್ಳಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಕೆಂಚಪ್ಪ, ಹರೀಶ್,ಸಣ್ಣಪ್ಪ,ಮಾರುತಿ, ರಮೇಶ್,ಚಂದ್ರ ಕಲಾ ಇದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!