Spread the love
ಕಡೂರು: ತಂಗಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಕೆ.ಆರ್.ಗಿರೀಶ್ ಮತ್ತು ಉಪಾಧ್ಯಕ್ಷೆಯಾಗಿ ಆರತಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದೆ ಅಧ್ಯಕ್ಷರಾಗಿದ್ದ ರಮೇಶ್ ಮತ್ತು ಉಪಾಧ್ಯಕ್ಷೆ ವಿಜಯಾಬಾಯಿ ಅವರ ರಾಜೀನಾಮೆಯಿಂದ ಈ ಸ್ಥಾನಗಳು ತೆರವಾಗಿದ್ದವು. ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಅಶೋಕ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಸೇರಿದಂತೆ ಹಲವಾರು ಗಣ್ಯರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪಿಡಿಓ ಸುನಿಲ್‌, ಕೃಷ್ಣಾನಾಯ್ಕ ಇದ್ದರು

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!