Spread the love

-ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಭರತ್‌ ಕೆಂಪರಾಜು ಅವರ ಕಾರು.

-ಕಡೂರು ಪಟ್ಟಣದ ವಿದ್ಯಾನಗರದಲ್ಲಿರುವ ಮನೆ.

 

ಕಡೂರು: ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಭರತ್ ಕೆಂಪರಾಜು ಅವರ ಕಾರನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.

ಭಾನುವಾರ ರಾತ್ರಿ ಪಟ್ಟಣದ ವಿದ್ಯಾನಗರದಲ್ಲಿರಯವ ಭರತ್ ಅವರ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಮುಂದಿನ ಗಾಜನ್ನು ಕಲ್ಲುಗಳಿಂದ ಜಜ್ಜಿ ಹಾನಿ ಮಾಡಿದ ಕಿಡಿಗೇಡಿಗಳು ಮನೆ ಆವರಣದ ಪಾಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದು ರಾಜಕೀಯ ಪ್ರೇರಿತವೇ ಅಥವಾ ವೈಯುಕ್ತಿಕ ದ್ವೇಷಕ್ಕಾಗಿ ಮಾಡಿದ ಕೃತ್ಯವೇ ಎಂಬುದು ತಿಳಿದುಬಂದಿಲ್ಲ.
ಯಾವ ಕಾರಣಕ್ಕಾಗಿ ಈ ರೀತಿ ಮಾಡಿದ್ದಾರೆಂಬುದು ಗೊತ್ತಿಲ್ಲ. ಆದರೆ ರಾಜಕೀಯವಾಗಿ ನನ್ನ ಮನಸ್ಥೈರ್ಯ ಕುಗ್ಗಿಸಲು ಇದರಿಂದ ಸಾಧ್ಯವಿಲ್ಲ. ಈ ಕುರಿತು ಪೊಲೀಸ್ ದೂರು ಸಲ್ಲಿಸಿದ್ದೇನೆ.ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಭರತ್ ಕೆಂಪರಾಜು ತಿಳಿಸಿದರು.
ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್, ತಾಲ್ಲೂಕು ಯುವಮೋರ್ಚಾ ಅಧ್ಯಕ್ಷ ಅಜ್ಜಯ್ಯ ಒಡೆಯರ್, ಬೀರೂರು ರಂಭಾಪುರಿ ಶಾಖಾ ಮಠದ ರುದ್ರಮುನಿ ಸ್ವಾಮೀಜಿ ಮುಂತಾದವರು ಭರತ್ ಮನೆಗೆ ಭೇಟಿ ನೀಡಿದ್ದರು.
ಕೃತ್ಯ ನಡೆದ ಸ್ಥಳಕ್ಕೆ ಪಿಎಸೈ ಪವನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭರತ್‌ ಕೆಂಪರಾಜು

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!