Spread the love
ಕಡೂರು: ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಶವವೊಂದನ್ನು ಸುಟ್ಟು ಹಾಕಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಶವ ಪೂರ ಸುಟ್ಟ ಸ್ಥಿತಿಯಲ್ಲಿದ್ದು, ಮಹಿಳೆಯೇ ಅಥವಾ ಪುರುಷನದೇ ಎಂಬುದು ಧೃಢಪಟ್ಟಿಲ್ಲ.ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಜಯಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಬೆಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳನ್ನು ಕರೆಸಲಾಗಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ಸ್ ಪೆಕ್ಟರ್ ರಫೀಕ್, ಪಿಎಸೈ ಪವನ್ ಕುಮಾರ್  ಸ್ಥಳದಲ್ಲಿದ್ದು ಅಗತ್ಯ ಕ್ರಮ ಕೈಗೊಂಡಿದ್ದಾರೆ.ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!