Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಮುಂದುವರೆದಿದೆ. ಜಿಲ್ಲೆಯ ಜೀವನಾಡಿ ನದಿಗಳಾದ ತುಂಗಾ,ಭಧ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.ಜನರು ನದೀಪಾತ್ರಕ್ಕೆ ತೆರಳದಂತೆ ಎಚ್ಚರದಿಂದಿರಲು ಜಿಲ್ಲಾಡಳಿತ ಸೂಚನೆ ನೀಡಿದೆ.

 

 

ಮಂಗಳವಾರ ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರವೊಂದು ಬಿದ್ದಿದೆ. ಮನೆಯಲ್ಲಿದ್ದವರು ಮರ ಬೀಳುವ ಸದ್ದು ಕೇಳಿ ಕೂಡಲೇ ಹೊರಗೋಡಿದ್ದರಿಂದ ಕೂದಲೆಳೆ ಅಂತರದಲ್ಲಿ. ಅಪಾಯದಿಂದ ಪಾರಾಗಿದ್ದಾರೆ.ಪ್ರೇಮ ಎಂಬುವವರ ಮೇಲೆ ಮರದ ರೆಂಗೆ ಬಿದ್ದು ಗಾಯಗೊಂಡಿದ್ದಾರೆ.ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳು ಪೂರ್ಣ ಜಖಂಗೊಂಡಿವೆ…

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!