
ಚಿಕ್ಕಮಗಳೂರು: ಪೆಟ್ರೋಲ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೂಡಿಗೆರೆ ತಾಲ್ಲೂಕಿನ ಹಿರೇಶಿಗರ ಬಳಿ ಪೆಟ್ರೋಲ್ ಟ್ಯಾಂಕರ್ ನಲ್ಲಿ ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ತುಂಬಿದ ಲಾರಿಯನ್ನು ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ. ಲಾರಿಗೆ ನಂಬರ್ ಪ್ಲೇಟ್ ಇಲ್ಲ.ಮೂಡಿಗೆರೆ ತಾಲ್ಲೂಕಿನಲ್ಲಿ ಎಲ್ಲಿಯೂ ಪೆಟ್ರೋಲ್ ಪೈಪ್ ಲೈನ್ ಕೊರೆದಿಲ್ಲ..ಬಹುಶಃಬೇರೆಲ್ಲಿಯೋ ಪೆಟ್ರೋಲ್ ಕಳ್ಳತನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಗೊಣೀಬೀಡು ಪೊಲೀಸರು ಪೆಟ್ರೋಲ್ ಲಾರಿ ವಶಪಡಿಸಿಕೊಂಡಿದ್ದು,ತನಿಖೆ ಪ್ರಗತಿಯಲ್ಲಿದೆ.
