Spread the love
ಮುಖ್ಯಾಂಶಗಳು.

– ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕೇರಳ ಪೊಲೀಸರು.

– ವಿಚಾರಣೆಯನ್ನು ಆಗಸ್ಟ್ 21 ಕ್ಕೆ ಮುಂದೂಡಿದ ನ್ಯಾಯಾಲಯ.

-ಕೇರಳದಲ್ಲಿ ಶರಣಾಗಿದ್ದ ಬಿ.ಜಿ.ಕೃಷ್ಣಮೂರ್ತಿ.

——————————————————-

ಚಿಕ್ಕಮಗಳೂರು: ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ರಾಜ್ಯದಲ್ಲಿ ನಕ್ಸಲ್ ಚಳುವಳಿಯ ನಾಯಕತ್ವ ವಹಿಸಿದ್ದ ಬಿ.ಜಿ.ಕೃಷ್ಣಮೂರ್ತಿ ಕೇರಳದಲ್ಲಿ ಕಳೆದ ವರ್ಷ  ಶರಣಾಗಿದ್ದರು.ನಕ್ಸಲ್ ಚಟುವಟಿಕೆ ಸಂಬಂಧ ಸುಮಾರು 66 ಪ್ರಕರಣಗಳು ದಾಖಲಾಗಿವೆ.ಚಿಕ್ಕಮಗಳೂರು-ಉಡುಪಿ- ದಕ್ಷಿಣಕನ್ನಡ ಜಿಲ್ಲೆಗಳ್ಲೂ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ನಕ್ಸಲ್ ನಾಯಕ ಸಾಕೇತರಾಜನ್ ನಂತರ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿದ್ದರು. ಕೇರಳದಲ್ಲಿ ಕಳೆದ ವರ್ಷ  ಶರಣಾಗಿದ್ದರು.
ಇಂದು ಕೇರಳ ಪೊಲೀಸರು ಚಿಕ್ಕಮಗಳೂರು ಜೆ‌ಎಂ.ಎಫ್.ಸಿ. ನ್ಯಾಯಾಲಯಕ್ಕೆ ಬಿ.ಜಿ.ಕೃಷ್ಣಮೂರ್ತಿಯವರನ್ನು ಹಾಜರುಪಡಿಸಿದ್ದು, ನ್ಯಾಯಾಲಯ ಆಗಸ್ಟ್ 21 ಕ್ಕೆ ವಿಚಾರಣೆ ಮುಂದೂಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕೂಂಬಿಂಗ್, ಮತ್ತಿತರ ಕಾರಣಗಳಿಂದಾಗಿ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು.
 ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!