ಕಡೂರು: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ಯು ಪ್ರಚಾರ ಇಲಾಖೆ ಏರ್ಪಡಿಸಿದ್ಸ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದಾಗ ವಿರೋಧಿಗಳು ಇದು ಸಾಧ್ಯವೇ ಇಲ್ಲ ಎಂದು ಹುಯಿಲೆಬ್ಬಿಸಿದರು. ಆದರೆ ಜನರು ಗ್ಯಾರಂಟಿ ಯೋಜನೆಗಳನ್ನು ನಂಬಿ ಪಕ್ಷಕ್ಕೆ ಬಲ ನೀಡಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಸ ಕೂಡಲೇ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಬಡಜನರಲ್ಲಿ ಶಕ್ತಿ ತುಂಬಿತು. ಅಭಿವೃದ್ಧಿ ಕಾರ್ಯಗಳಲ್ಲಿಯೂ ಹಿಂದೆ ಬಿದ್ದಿಲ್ಲ. ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ವಾರ್ತಾ ಇಲಾಖೆ ಮೂಲಕ ಮಾಲಾಗುತ್ತಿದೆ. ಸರ್ಕಾರ ಎಂದಿಗೂ ಬಡಜನರ ಪರವಾಗಿರುತ್ತದೆ ಎಂಬುದಕ್ಕೆ ಐದೂ ಗ್ಯಾರಂಟಿಗಳಿಂದ ರಾಜ್ಯದ ಜನತೆ ವಿಶೇಷವಾಗಿ ಮಹಿಳೆಯರು ಸ್ವಾವಲಂಬಿಗಳಾಗಿರುವುದೇ ಸಾಕ್ಷಿಯಾಗಿದೆ ಎಂದರು.
ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ,
ಪಂಚಗ್ಯಾರಂಟಿಗಳಿಂದ ರಾಜ್ಯದ ಜನತೆಗೆ ನೆಮ್ಮದಿಯ ಬದುಕು ದೊರೆತಿದೆ. ಕಾಂಗ್ರೆಸ್ ಸರ್ಕಾರ ಬಡಜನರ ಮತ್ತು ಅಭಿವೃದ್ಧಿಪರವಾಗಿ ಸದಾ ಶ್ರಮಿಸುತ್ತದೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಸ್ವಾಮಿ ಗ್ಯಾರಂಟಿ ಯೋಜನೆಗಳ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ವಾರ್ತಾ ಇಲಾಖೆ ಜಿಲ್ಲಾ ಮುಖ್ಯಸ್ಥ ಮಂಜೇಗೌಡ,
ಕಾಡಾ ಅಧ್ಯಕ್ಷ ಡಾ.ಎಂ.ಸಿ.ಅಂಶುಮಂತ್,
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಆಸಂದಿ ಕಲ್ಲೇಶ್, ಜಿಲ್ಲಾ ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಮುಖಂಡರಾದ ದಾಸಯ್ಯನಗುತ್ತಿ ಚಂದ್ರಪ್ಪ, ಪುರಸಭೆ ನಾಮಿನಿ ಸದಸ್ಯ ಕೃಷ್ಣಪ್ಪ ಇದ್ದರು.
———–
ವಾರ್ತಾ ಇಲಾಖೆ ಅಚ್ಚುಕಟ್ಟಾಗಿ ಏರ್ಪಡಿಸಿದ್ದ
ವಸ್ತು ಪ್ರದರ್ಶನದಲ್ಲಿ ಸರ್ಕಾರದ ಸಾಧನೆಗಳ ವಿವರ,ಫಲಾನುಭವಿಗಳ ಅನಿಸಿಕೆಗಳು, ಗ್ಯಾರಂಟಿ ಯೋಜನೆಗಳ ವಿವರಗಳನ್ನು ಅನಾವರಣ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕೃತಿ ಜನರ ಗಮನ ಸೆಳೆಯಿತು. ಸಾರ್ವಜನಿಕರು ಸಿದ್ದರಾಮಯ್ಯನವರ ಪ್ರತಿಕೃತಿ ಬಳಿ ನಿಂತು ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದದ್ದು ವಿಶೇಷ.

