Spread the love
 ಕಡೂರು : ಯುವಸಮೂಹ ಲೈಂಗಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಇರ್ಫಾನ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಏಡ್ಸ್ ತಡೆಗಟ್ಟುವಿಕೆಯಲ್ಲಿ ಯುವಕರ ಪಾತ್ರ ಮಹತ್ವದ್ದು. ಎಚ್‌ಐವಿ ಸೋಂಕಿತರ ಬಗ್ಗೆ ಇರುವ ಕಳಂಕ ಮತ್ತು ತಾರತಮ್ಯವನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು. ಸರಕಾರ ಆರೋಗ್ಯ ಇಲಾಖೆಯ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸುತ್ತಿದೆ. ಇವುಗಳು ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳಬೇಕು. ಎಚ್‌ಐವಿ ಸೋಂಕಿತರ  ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಯುವಪೀಳೀಗೆಯ ದೊಡ್ಡ ಜವಬ್ದಾರಿ ಎಂದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ. ಗುರುಮೂರ್ತಿ ಉಪನ್ಯಾಸ ನೀಡಿದರು. ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶ ತಹಾಖಲೀಲ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ನರ್ಸೀಂಗ್ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜಾಥಾ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!