Spread the love

ಕಡೂರು: 2024-25 ನೇ ಸಾಲಿನಲ್ಲಿ ಶೇ90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಪುರಸ್ಕರಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎಂ.ಬಿ.ಮಂಜುನಾಥ್ ಹೇಳಿದರು.

ಬುಧವಾರ ಈ ಕುರಿತು ಮಾತನಾಡಿದ ಅವರು,
24-25 ನೇ ಸಾಲಿನ ವಾರ್ಷಿಕ ಮಹಾಸಭೆ ಡಿಸೆಂಬರ್ 14 ರಂದು ಮಲ್ಲೇಶ್ವರದ ಸ್ವರ್ಣಾಂಭ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ. ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಪುರಸ್ಕರಿಸಲಿದ್ದಾರೆ.ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಲ್ಲೂಕು ಪಂಚಾಯ್ತಿ ಇಓ ಸಿ.ಆರ್.ಪ್ರವೀಣ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.ಎನ್.ಇ.ಶಿವಕುಮಾರ್ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಎಂ.ಬಿ.ಮಂಜುನಾಥ್
ಸರ್ಕಾರದ ಯಾವುದೇ ಯೋಜನೆಗಳ ಅನುಷ್ಠಾನವಾಗಲು ಸರ್ಕಾರಿ ನೌಕರರು ಶ್ರಮ ವಹಿಸುತ್ತಾರೆ. ಸರ್ಕಾರಿ ನೌಕರರಿಗೂ ಹಲವಾರು ಸಮಸ್ಯೆಗಳಿವೆ.ಅವುಗಳ ಪರಿಹಾರಕ್ಕೆ ಸರ್ಕಾರವೂ ಸ್ಪಂದಿಸುತ್ತಿದೆ. ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಜೆ ಸಂಘ ಯಾವಾಗಲೂ ನೌಕರರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲ್ಲೂಕು ಘಟಕವೂ ಸಹ ಹೆಚ್ಚು ಪಾರದರ್ಶಕತೆಯಿಂದ ಎಲ್ಲರ ವಿಶ್ವಾಸದೊಂದಿಗೆ ಮುನ್ನಡೆಯುತ್ತಿದೆ ಎಂದರು.
ಗೌರವಾಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ರುದ್ರೇಶ್,ರಾಜ್ಯ ಪರಿಷತ್ ಸದಸ್ಯ ಬಿ.ಸುರೇಶ್, ಖಜಾಂಚಿ ಟಿ.ಎಂ.ರಾಜಶೇಖರ್ ಮತ್ತಿತರೆ ಪದಾಧಿಕಾರಿಗಳು ಇದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!