Spread the love

ಕಡೂರು: ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರು ಡಿಸೆಂಬರ್ 23 ರ ಮಂಗಳವಾರ ಕಡೂರಿಗೆ ಆಗಮಿಸಲಿದ್ದಾರೆ ಎಂದು ಕಡೂರು ಶೃಂಗೇರಿ ಶಾರದಾ ಮಠದ ಆಡಳಿತಾಧಿಕಾರಿ ಬೀರೂರು ಮಂಜುನಾಥ್ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಮಂಗಳವಾರ ಸಂಜೆ ಆಗಮಿಸುವ ಗುರುಗಳು ಧೂಳಿ ಪಾದಪೂಜೆ ಮತ್ತು ಚಂದ್ರಮೌಳೀಶ್ವರ ದೇವರಿಗೆ ಪೂಜೆ ನೆರವೇರಿಸಲಿದ್ದು, ಬುಧವಾರ ಬೆಳಿಗ್ಗೆ ಶಾರದಾ ಮಠದಲ್ಲಿ , ಬಿಕ್ಷಾವಂದನೆ  ಶಾರದಾದೇವಿ, ಶಂಕರಾಚಾರ್ಯರಿಗೆ ಪೂಜೆ ನಡೆಯಲಿದೆ. ನಂತರ ಶ್ರೀಗಳಿಗೆ ಪಾದಪೂಜೆ ನಡೆಯಲಿದ್ದು, ಭಕ್ತರಿಗೆ ಫಲಮಂತ್ರಾಕ್ಷತೆ , ಶ್ರೀಗಳ ಅನುಗ್ರಹ ಭಾಷಣವಿರುತ್ತದೆ. ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುಗಳ ಆಶೀರ್ವಾದ ಪಡೆಯಬೇಕೆಂದು ಅವರು ಮನವಿ ಮಾಡಿದರು. ತಾಲ್ಲೂಕು ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷ ಚೋಮನಹಳ್ಳಿ ಶ್ರೀನಿವಾಸ್ ಇದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!