Oplus_131072
Spread the love

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಬೆಂಕಿ ಹೊತ್ತಿಕೊಂಡು ಪೂರ್ಣ ಭಸ್ಮವಾಗಿದೆ.
ಮೆಕ್ಕೆಜೋಳ ತುಂಬಿಕೊಂಡು ಜಾವಗಲ್ಲಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ಶುಕ್ರವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ‌ಮೆಕ್ಕೆ ಜೋಳ ಸುಟ್ಟು ಕರಕಲಾಗಿದೆ. ಷಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಲಾರಿಗೆ ಬೆಂಕಿ ಹೊತ್ತಿದ್ದರಿಂದ ಚಾರ್ಮಾಡಿ ಅರಣ್ಯಕ್ಕೂ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳದವರು ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಲಾರಿಯಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!