ಕಡೂರು:ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲಿಗೆ ಬಂದಿದ್ದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ.
ಬಾಳೆ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಿದ್ದೇನೆ. ಸುಮಾರು 20ಲಕ್ಷ ನಷ್ಟವಾಗಿದೆ. ಈ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ.
ಮಂಗಳವಾರ ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

