Spread the love

 

ಕಡೂರು: ಮಲ್ಲೇಶ್ವರದ ಸ್ವರ್ಣಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ  ಮಂಗಳವಾರ ಧ್ವಜಾರೋಹಣ ಹಾಗೂ ರಥ ಕಳಶಾರೋಹಣ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ನಂತರ ರಥಕ್ಕೆ ಪ್ರತಿಷ್ಠಾಪಿಸುವ ರಜತ ಕಳಶವನ್ನು ಮೂಲ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ನಡೆಸಿ ನಂತರ ಕಳಶವನ್ನು ಗ್ರಾಮದೊಳಕ್ಕೆ ಉತ್ಸವದಲ್ಲಿ ಕೊಂಡೊಯ್ದು, ಉತ್ಸವ ದೇವಿ ದೇವಸ್ಥಾನದ ಬಳಿ ಗ್ರಾಮಸ್ಥರು ಪೂಜೆ ಸಲ್ಲಿಸಿದ ನಂತರ ಮೂಲ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಿ ರಥಕ್ಕೆ ಕಳಸವನ್ನು ಪ್ರತಿಷ್ಠಾಪಿಸಲಾಯಿತು.
ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ಹಾಗೂ ಧರ್ಮದರ್ಶಿ ಮಂಡಳಿ ಸದಸ್ಯರು ಇದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!